ಧೀಮತಿ ಮಹಿಳಾ ಸಮಾಜದಿಂದ ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಅಭಿನಂದನೆ
ಧೀಮತಿ ಮಹಿಳಾ ಸಮಾಜದಿಂದ ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಅಭಿನಂದನೆ
ಧೀಮತಿ ಮಹಿಳಾ ಸಮಾಜದಿಂದ ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಅಭಿನಂದನೆ
ಸಾಮಾಜಿಕ ಸೇವೆ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಹಲವು ದಶಕಗಳಿಂದ ಸಲ್ಲಿಸಿರುವ ಅಪೂರ್ವ ಸೇವೆಯನ್ನು ಗುರುತಿಸಿ, ವಿಶೇಷವಾಗಿ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಮೂಲಕ ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವಲ್ಲಿ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ, ಸ್ವಿಟ್ಜರ್ಲ್ಯಾಂಡ್‌ನ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ವತಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಹೇಮಾವತಿ ವಿ. ಹೆಗ್ಗಡೆ ಅಮ್ಮನವರಿಗೆ, ಧೀಮತಿ ಮಹಿಳಾ ಸಮಾಜ, ಉಜಿರೆ ವತಿಯಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಈ ಸಂಧರ್ಭದಲ್ಲಿ ಅಖಿಲ ಕರ್ನಾಟಕ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ. ರಜತಾ ಪಿ. ಶೆಟ್ಟಿ, ಧೀಮತಿ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಪ್ರವೀಣ್ ಕುಮಾರ್, ಉಪಾಧ್ಯಕ್ಷೆ, ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ ಹಾಗೂ ಸಮಾಜದ ಇತರ ಸದಸ್ಯೆಯರು ಉಪಸ್ಥಿತರಿದ್ದು, ಹೇಮಾವತಿ ಅಮ್ಮನವರಿಗೆ ಆತ್ಮೀಯವಾಗಿ ಅಭಿನಂದಿಸಿದರು. ಅವರ ಸಮಾಜಮುಖಿ ಸೇವೆ ಮತ್ತಷ್ಟು ವಿಸ್ತಾರಗೊಂಡು, ಸಮಾಜಕ್ಕೆ ಸ್ಫೂರ್ತಿದಾಯಕವಾಗಿ ಮುಂದುವರಿಯಲಿ ಎಂದು ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಈ ಆತ್ಮೀಯ ಭೇಟಿಯು ಗೌರವ, ಕೃತಜ್ಞತೆ ಮತ್ತು ಸಂತಸದ ಕ್ಷಣಗಳಿಗೆ ಸಾಕ್ಷಿಯಾಯಿತು.